ಪಂಜಾಬ್ : ಸ್ನೇಹಿತನ ಜತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು 10 ಜನ ಕಾಮುಕರು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಪಂಜಾಬ್ ನ ಲೂದಿಯಾನದಲ್ಲಿ ನಡೆದಿದೆ.
ಶನಿವಾರ ರಾತ್ರಿ ಯುವತಿ ಸ್ನೇಹಿತನ ಜತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ 10 ಜನ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಯುವತಿಯನ್ನು ಕಾರಿನಿಂದ ಹೊರ ಎಳೆದು ಹತ್ತಿರದ ಕೆನಾಲ್ ಬಳಿಯ ನಿರ್ಜನ ಪ್ರದೇಶಕ್ಕೆ ಒಯ್ದು, ಸಾಮೂ.ಹಿಕ ಅತ್ಯಾಚಾರ ಎಸಗಿದ್ದಾರೆ.
ಅಷ್ಟೇ ಅಲ್ಲದೇ ಸಂತ್ರಸ್ತ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಭಾನುವಾರದವರೆಗೂ ಅಲ್ಲಿ ಇರಿಸಿಕೊಂಡು ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತೆ ಈ ಕುರಿತು ಲೂಧಿಯಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು, ಕಾಮುಕರ ಪತ್ತೆಗೆ ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.