Publish Date: Fri, 28 Sep 2018 (08:29 IST)
Updated Date: Fri, 28 Sep 2018 (08:31 IST)
ಲಕ್ನೋ : ಚಲಿಸುತ್ತಿದ್ದ ಕಾರಿನಲ್ಲಿಯೇ 20 ವರ್ಷದ ಯುವತಿಯೊಬ್ಬಳ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಸಂತ್ರಸ್ತೆ ಹಬ್ಬ ಮುಗಿಸಿಕೊಂಡು ಊರಿಗೆ ಹಿಂದಿರುಗಲು ಕಾರಿಗಾಗಿ ಕಾಯುತ್ತಿದ್ದ ವೇಳೆ ನಾಲ್ವರು ಮಂದಿ ಬಂದು ಆಕೆಯನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಬಳಿಕ ಬಲವಂತವಾಗಿ ಮತ್ತು ಬರುವ ಔಷಧಿಯನ್ನು ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ಬಳಿಕ ಸಂತ್ರಸ್ತೆಯನ್ನು ಆಕೆಯ ಮನೆಯ ಹಿಂಭಾಗದಲ್ಲಿಯೇ ಎಸೆದು ಹೋಗಿದ್ದಾರೆ. ಕೂಡಲೇ ಸಂತ್ರಸ್ತೆಯ ಪೋಷಕರು ಆಕೆಯನ್ನು ಲಾಲ ಲಜಪತ್ ರಾಯ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಜ್ಞೆ ಬಂದ ಬಳಿಕ ಸಂತ್ರಸ್ತೆ ನಡೆದ ಘಟನೆಯ ಬಗ್ಗೆ ತಿಳಿಸಿದ್ದಾಳೆ.
ಈ ಬಗ್ಗೆ ಸಂತ್ರಸ್ತೆಯ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂತ್ರಸ್ತೆಯ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಂಡ ಪೊಲೀಸರು , ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಹಾಗೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ಕೂಡ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.