ಲಕ್ನೋ : ಅಪ್ರಾಪ್ತ ಬಾಲಕಿಯ ಮೇಲೆ 5 ತಿಂಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
14 ವರ್ಷದ ಬಾಲಕಿಯನ್ನು ಅದೇ ಗ್ರಾಮದ 45 ವರ್ಷದ ವ್ಯಕ್ತಿಯೊಬ್ಬರು ಆಮಿಷವೊಡ್ಡಿ ಮುಂಬೂಗೆ ಕರೆದೊಯ್ದಿದ್ದಾರೆ. ನಂತರ ಅಲ್ಲಿ ಆತ ಹಾಗೂ ಇನ್ನಿಬ್ಬರೊಂದಿಗೆ 5 ತಿಂಗಳ ಕಾಳ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.
ಆರೋಪಿಗಳ ಹಿಡಿತದಿಂದ ಆಕೆ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಬಂದಿದ್ದಾಳೆ. ಆ ಬಳಿಕ ಆಕೆ ತನಗಾದ ನರಳಾಟವನ್ನು ವಿವರಿಸಿದ್ದಾಳೆ. ಘಟನೆ ಸಂಬಂಧಿಸಿ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಸಂಬಂಧಿಸಿ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಹಾಗೂ ಮತ್ತಿಬ್ಬರು ಆರೋಪಿಗಳ ಬಂಧನಕ್ಕಾಗಿ ಶೋಧ ಮುಂದುವರಿದಿದೆ ಎಂದು ಜ್ಞಾನಪುರ ಸರ್ಕಲ್ ಆಫೀಸರ್ ಭುವನೇಶ್ವರ್ ಪಾಂಡೆ ತಿಳಿಸಿದ್ದಾರೆ.