ಅಪಹರಣಗೊಂಡಿದ್ದ ಇಬ್ಬರು ಬಾಲಕಿಯರು ನಿನ್ನೆ ಬೆಳಿಗ್ಗೆ ಗ್ರಾಮಕ್ಕೆ ಮರಳಿದ ನಂತರ ಅವರ ಪೋಷಕರು ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ನವೆಂಬರ್ 10 ರಂದು ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರಗೈದ ಅಮಾನುಷ ಘಟನೆ ನೋಯಿಡಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇಬ್ಬರು ಬಾಲಕಿಯರ ಮೇಲೆ ಇಬ್ಬರು ಯುವಕರು ಮತ್ತು ಇಬ್ಬರು ಮಧ್ಯವಯಸ್ಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೆಹಲಿಯ ಹೊರವಲಯದ ಮನೆಯೊಂದರಲ್ಲಿ ಇಬ್ಬರು ಬಾಲಕಿಯರ ನಾಲ್ಕು ಮಂದಿ ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.