ಗುವಾಹಟಿ : 16 ವರ್ಷದ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗೆ ಪೊಲೀಸರು ಎನ್ಕೌಂಟರ್ ಮಾಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ.
ಗುವಾಹಟಿಯ ಹೊರವಲಯದಲ್ಲಿ ಅಪರಾಧ ಸ್ಥಳದ ಮಹಜರಿಗಾಗಿ ಬಂದಿದ್ದ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಪೊಲೀಸರು ಗುಂಡುಹಾರಿಸಿ ಆರೋಪಿಯನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾತನಾಡಿರುವ ಪೊಲೀಸರು, ಬಿಕಿಅಲಿ (20), ರಾಜೇಶ್ ಮುಂಡಾ (38) ಎಂಬ ಆರೋಪಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರಿಂದಾಗಿ ಅವರ ಮೇಲೆ ಗುಂಡು ಹಾರಿಸಲಾಗಿದೆ ಎಂದಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಎಸ್ಪಿ ಅಭಿಜಿತ್ ಶರ್ಮಾ, ಅಲಿಯ ದೇಹದ ನಾಲ್ಕು ಭಾಗಗಳಲ್ಲಿ ಗಾಯದ ಗುರುತುಗಳಾಗಿವೆ. ಒಂದು ಎದೆಯ ಭಾಗದಲ್ಲಿ ಉಳಿದ ಮೂರು ಬೆನ್ನಿನ ಭಾಗದಲ್ಲಿ ಗಾಯಗಳಾಗಿದ್ದವು.
ಆರೋಪಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಗುಂಡಿನ ಗಾಯದ ಪೂರ್ಣ ವಿರವರಗಳು ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಮತ್ತೊಬ್ಬ ಆರೋಪಿ ಮಜ್ಬತ್ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ. ಈ ವೇಳೆ ಪೊಲೀಸರ ಗುಂಡೇಟಿಗೆ ತೀವ್ರವಾಗಿ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ.
ಅಲ್ಲದೆ, ಗುವಾಹಟಿಯ ಪನ್ಬಜಾರ್ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ಟ್ವಿಂಕಲ್ ಗೋಸ್ವಾಮಿ ಸಹ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕಾಲು ಮತ್ತು ಕೈಗೆ ಸಣ್ಣಪುಟ್ಟ ಗಾಯಗಳಾಗಿರುವ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಶರ್ಮಾ ಹೇಳಿದ್ದಾರೆ.
ಫೆ.16ರಂದು ಸಂತ್ರಸ್ತ ಬಾಲಕಿಯ ಕುಟುಂಬವು ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ, ವಿಷಯ ಹೊರಗೆ ತಿಳಿಸಿದರೆ, ಚಿತ್ರೀಕರಿಸಿದ ವೀಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಈ ನಡುವೆ ಚಿತ್ರೀಕರಿಸಿದ ವೀಡಿಯೋವನ್ನು ಡಿಲೀಟ್ ಮಾಡುವುದಾಗಿ ಹೇಳಿ ಫೆ.19 ರಂದು ಗುವಾಹಟಿಯ ಹೋಟೆಲ್ಗೆ ಹುಡುಗಿಯನ್ನು ಕರೆದು ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.