Publish Date: Thu, 06 Aug 2020 (22:39 IST)
Updated Date: Thu, 06 Aug 2020 (22:41 IST)
ಕೊರೊನಾ ಕೇಸ್ ಗಳು ಈ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದರಿಂದಾಗಿ ಹೇರಲಾಗಿದ್ದ ನಿರ್ಬಂಧ ನಿಧಾನವಾಗಿ ಸಡಿಲಗೊಳ್ಳುತ್ತಿದೆ.
ಇದೀಗ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬರುತ್ತಿದೆ.
ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೋಟೆಲ್‌ಗಳು, ಜಿಮ್‌ಗಳು ಮತ್ತು ಮಾರುಕಟ್ಟೆಗಳನ್ನು ಪುನಃ ತೆರೆಯುವಂತೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಪ್ರಸ್ತಾವನೆ ಕಳುಹಿಸಿದ್ದಾರೆ. ಈ ಹಿಂದೆ ಎರಡು ಸಲ ಅರವಿಂದ ಕೇಜ್ರಿವಾಲ್ ಕಳಿಸಿದ ಪ್ರಸ್ತಾವನೆಯನ್ನು ರಾಜ್ಯಪಾಲರು ತಿರಸ್ಕಾರ ಮಾಡಿದ್ದರು.