Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯೇ ಅತ್ಯಾಚಾರವೆಸಗಿರುವ ಪ್ರಕರಣ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರಕರಣ ಸಂಬಂಧಿಸಿದಂತೆ ಶನಿವಾರ ದೂರು ದಾಖಲಿಸಲಾಗಿದ್ದು, ದೂರಿನಲ್ಲಿ ಬಾಲಕಿ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಬಡಮಕ್ಕಳಿಗಾಗಿಯೇ ಇರುವ ಸಂಸ್ಥೆಯೊಂದರಲ್ಲಿ ಉಳಿದುಕೊಂಡಿದ್ದಳು. ಆದರೆ ರಜೆಗೆಂದು ದೆಹಲಿಗೆ ಬಂದಿದ್ದಳು ಎಂದು ತಿಳಿಸಲಾಗಿದೆ.
ಬಾಲಕಿಯ ತಾಯಿ ಮತ್ತು ಮಲತಂದೆ ಚಿರಾಗ್ ದೆಹಲಿಯ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಈ ವೇಳೆ ರಜೆಗೆಂದು ಬಂದಿದ್ದ ಬಾಲಕಿ ಮೇಲೆ ಮಲತಂದೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿರುವುದಾಗಿ ಉಪ ಪೊಲೀಸ್ ಆಯುಕ್ತ(ದಕ್ಷಿಣ)ಬೆನಿಟಾ ಮೇರಿ ಜೈಕರ್ ತಿಳಿಸಿದ್ದಾರೆ.
ಇದೀಗ ಮಲತಂದೆಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಹೇಳಿದ್ದಾರೆ.