Publish Date: Tue, 08 Nov 2022 (12:32 IST)
Updated Date: Tue, 08 Nov 2022 (11:11 IST)
ಲಕ್ನೋ : ಮದುವೆ ಪ್ರಸ್ತಾಪವನ್ನು ನಿರಾಕರಿಸಿದ 14 ವರ್ಷದ ಬಾಲಕಿ ಕತ್ತು ಹಿಸುಕಿ ನೆರೆಮನೆಯವನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.
ಕೃತ್ಯ ಎಸಗಿದ ಬಳಿಕ ಬಾಲಕಿಯ ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಸೋನು ಬಂಜಾರ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ನವೆಂಬರ್ 5 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದು, ಮರುದಿನ ಹಾಜಿಪುರ ಗ್ರಾಮದ ಹೊಲದಲ್ಲಿ ಆಕೆಯ ಶವ ಪತ್ತೆಯಾಗಿದೆ.
ತನ್ನ ಮಗಳನ್ನು ಮದುವೆಯಾಗುವಂತೆ ಆರೋಪಿ ಪೀಡಿಸುತ್ತಿದ್ದು, ತನ್ನ ಕುಟುಂಬಕ್ಕೂ ಬೆದರಿಕೆ ಹಾಕಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.