ನವದೆಹಲಿ : ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ಮುಂದುವರಿದಿದೆ.
ನ್ಯಾಯಮೂರ್ತಿಗಳನ್ನು ನೇಮಿಸುವ ಕೊಲಿಜಿಯಂ ವ್ಯವಸ್ಥೆಯಲ್ಲಿ ಸರ್ಕಾರದ ಪ್ರತಿನಿಧಿಗೂ ಅವಕಾಶ ಕಲ್ಪಿಸಬೇಕೆಂದು ಕೋರಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪತ್ರ ಬರೆದಿದ್ದಾರೆ.
ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.
ತಮ್ಮ ಪತ್ರದಲ್ಲಿ ರಿಜಿಜು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗವನ್ನು 2015ರಲ್ಲಿ ರದ್ದು ಮಾಡುವಾಗ ನ್ಯಾಯಾಧೀಶರ ನೇಮಕ ಸಂಬಂಧದ ಪುನರ್ ರಚನೆಯ ಬಗ್ಗೆ ಸುಪ್ರೀಂ ಸಂವಿಧಾನಿಕ ಪೀಠ ಉಲ್ಲೇಖಿಸಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.