ನವದೆಹಲಿ : ಅತ್ಯಾಚಾರ ಹಾಗೂ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತರಿಗೆ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿ ಪರಿಹಾರ ನೀಡುತ್ತಿರುವ ಹಿನ್ನಲೆಯಲ್ಲಿ ಇದೀಗ ಸಂತ್ರಸ್ತರಿಗೆ ದೇಶದಾದ್ಯಂತ ಏಕರೂಪ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂಕೋಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಒಂದೊಂದು ರಾಜ್ಯಗಳು ಒಂದೊಂದು ರೀತಿಯಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡುವುದು ಸರಿಯಾದ ಕ್ರಮವಲ್ಲ. ಒರಿಸ್ಸಾದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದವರಿಗೆ 10 ಸಾವಿರ ರೂ. ಗೋವಾದಲ್ಲಿ 10 ಲಕ್ಷ, ಇನ್ನು ಕೆಲವು ರಾಜ್ಯಗಳಲ್ಲಿ ಸತ್ರಸ್ತೆಗೆ ನಯಾಪೈಸೆ ಪರಿಹಾರ ನೀಡಿಲ್ಲ. ಇದು ಎಷ್ಟರಮಟ್ಟಿಗೆ ಸರಿ ಎಂದು ಸರಿ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಮದನ್ ಬಿ.ಲೋಕೂರ್, ಎಸ್.ಅಬ್ದುಲ್ ನಜೀರ್ ಮತ್ತು ದೀಪಕ್ ಗುಪ್ತ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಪ್ರಶ್ನೆ ಮಾಡಿದೆ.
ಆದ್ದರಿಂದ ಇನ್ನುಮುಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾದರೆ ಐದು ಲಕ್ಷ ಹಾಗೂ ಅತ್ಯಾಚಾರಕ್ಕೊಳಗಾದರೆ 4 ಲಕ್ಷ ರೂ. ಪರಿಹಾರವನ್ನು ಸಂತ್ರಸ್ತರಿಗೆ ನೀಡಬೇಕು. ಅ.2ರಿಂದ ಈ ಆದೇಶವನ್ನು ಜಾರಿ ಮಾಡಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ಅಲ್ಲದೇ ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಸಮಾಲೋಚನೆ ನಡೆಸಬೇಕೆಂದು ನಿರ್ದೇಶಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.