Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗೋದ್ರಾ ಹತ್ಯಾಕಾಂಡ: 11 ಅಪರಾಧಿಗಳ ಗಲ್ಲುಶಿಕ್ಷೆಗೆ ಹೈಕೋರ್ಟ್ ತಡೆ

ಗೋದ್ರಾ ಹತ್ಯಾಕಾಂಡ: 11 ಅಪರಾಧಿಗಳ ಗಲ್ಲುಶಿಕ್ಷೆಗೆ ಹೈಕೋರ್ಟ್ ತಡೆ
ಅಹಮದಾಬಾದ್ , ಸೋಮವಾರ, 9 ಅಕ್ಟೋಬರ್ 2017 (14:31 IST)
ಅಹಮದಾಬಾದ್: 2002ರ ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 11 ದೋಷಿಗಳಿಗೆ ನೀಡಿದ್ದ ಗಲ್ಲುಶಿಕ್ಷೆಗೆ ಗುಜರಾತ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಪರಾಧಿಗಳಿಗೆ ನೀಡಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ ಆದೇಶ ನೀಡಿದೆ.

ಫೆಬ್ರವರಿ 27ರಂದು ಗೋದ್ರಾ ಸಾಬರಮತಿ ಎಕ್ಸ್ ಪ್ರೆಸ್ ರೈಲಿನ ಎಸ್ 6 ಬೋಗಿಗೆ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ 59 ಕರಸೇವಕರು ಸಜೀವ ದಹನವಾಗಿದ್ದರು. ಈ ಪ್ರಕರಣದಲ್ಲೆ ಕೋರ್ಟ್ 11 ದೋಷಿಗಳಿಗೆ ಮರಣದಂಡನೆ, 20 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇನ್ನುಳಿದ 63 ಮಂದಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು.

ಪ್ರಕರಣದಲ್ಲಿ 63 ಮಂದಿಯನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಇಂದು ಸಹ ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ಪ್ರಧಾನಿ ನವಾಜ್ ಷರೀಫ್ ಮಗಳು, ಅಳಿಯನ ಬಂಧನ