Select Your Language

Notifications

webdunia
webdunia
webdunia
webdunia

ಗೋಧ್ರಾ ರೈಲು ಬೋಗಿ ಸುಟ್ಟ ಪ್ರಕರಣ

ಗೋಧ್ರಾ
ನವದೆಹಲಿ : 2002ರ ಗೋಧ್ರಾ ರೈಲು ಬೋಗಿಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣದ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಇತರ ನಾಲ್ವರು ಅಪರಾಧಿಗಳ ಜಾಮೀನು ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು 17 ವರ್ಷಗಳಿಂದ ಜೈಲುವಾಸ ಅನುಭವಿಸಿದ ಎಂಟು ಅಪರಾಧಿಗಳಿಗೆ ಜಾಮೀನು ನೀಡಿದೆ. 

ವಿಚಾರಣಾ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್ ಇತ್ತೀಚೆಗೆ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು. ಅವರ ಜಾಮೀನು ಅರ್ಜಿಯನ್ನು ಈಗ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಸುವಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ಡಿಕ್ಕಿ !