ನವದೆಹಲಿ : ನವೆಂಬರ್ ತಿಂಗಳಿನಲ್ಲಿ 1,45,867 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್ಟಿ ಸಂಗ್ರಹ ಶೇ.11ರಷ್ಟು ಏರಿಕೆಯಾಗಿದೆ. ಕಳೆದ ನವೆಂಬರ್ನಲ್ಲಿ 1,31,526 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು. ಸತತ 9ನೇ ಬಾರಿಗೆ ಜಿಎಸ್ಟಿ ಸಂಗ್ರಹ 1.40 ಲಕ್ಷ ಕೋಟಿ ರೂ. ಗಡಿ ದಾಟುತ್ತಿದೆ.
ಅಕ್ಟೋಬರ್ನಲ್ಲಿ ಸಂಗ್ರಹವಾದ ಜಿಎಸ್ಟಿಗೆ ಹೋಲಿಸಿದರೆ ನವೆಂಬರ್ ಜಿಎಸ್ಟಿ ಸಂಗ್ರಹ ಕಡಿಮೆಯಾಗಿದೆ. ಅಕ್ಟೋಬರ್ನಲ್ಲಿ 1,51,718 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು.
ಒಟ್ಟು ಜಿಎಸ್ಟಿ ಸಂಗ್ರಹದಲ್ಲಿ ಕೇಂದ್ರ ಜಿಎಸ್ಟಿ ಪಾಲು 25,681 ಕೋಟಿ ರೂ ಆಗಿದ್ದರೆ ರಾಜ್ಯ ಜಿಎಸ್ಟಿ 32,651 ಕೋಟಿ ರೂ. ಆಗಿದೆ.
ಇಂಟಿಗ್ರೇಟೆಡ್ ಜಿಎಸ್ಟಿ(ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 77,103 ಕೋಟಿ ರೂ.ಗಳಾಗಿವೆ. ಇದರಲ್ಲಿ 10,433 ಕೋಟಿ ರೂ.(ವಸ್ತುಗಳನ್ನು ಆಮದು ಮಾಡಿಕೊಂಡಿದ್ದಕ್ಕೆ 817 ಕೋಟಿ ರೂ. ಸಂಗ್ರಹ ಸೇರಿ) ಸೆಸ್ ಕೂಡ ಸೇರಿದೆ.