ಅಹಮ್ಮದಾಬಾದ್: ಗೂಡ್ಸ್ ಆಂಡ್ ಸರ್ವಿಸ್ ಟ್ಯಾಕ್ಸ್ (ಜಿಎಸ್ ಟಿ)ಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಜಿಎಸ್ ಟಿಯಿಂದ ಸಣ್ಣ ಪ್ರಮಾಣದ ವರ್ತಕರಿಗೆ ತೊಂದರೆಯಾಗಿದೆ. ಇದು ಖಳನಾಯಕ ಗಬ್ಬರ್ ಸಿಂಗ್ ನಂತೆ ಅವರಿಗೆ ತೋರುತ್ತಿದೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.
ಗುಜರಾತ್ ನಲ್ಲಿ ಚುನಾವಣೆ ಚಟುವಟಿಕೆಗಳು ಗರಿಗೆದರಿದ ಹಿನ್ನಲೆಯಲ್ಲಿ ಗಾಂಧಿನಗರದಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್, ನಡುರಾತ್ರಿ ನೋಟು ನಿಷೇಧ ಮಾಡಿದ ಪ್ರಧಾನಿ ಮೋದಿ ನಿರ್ಧಾರವನ್ನೂ ಕಟುವಾಗಿ ಟೀಕಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ