ಬಹುನಿರೀಕ್ಷಿತ ಸರಕು ಸಾಗಾಣೆ ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜೂನ್ 1 ರಿಂದ ದೇಶಾದ್ಯಂತ ಜಾರಿಗೊಳ್ಳಲಿರುವುದರಿಂದ, ಜೂನ್ 30 ರಂದು ಮಧ್ಯರಾತ್ರಿ ಸಂಸತ್ತಿನಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಜಿಎಸ್‌ಟಿ ಜಾರಿ ವಿಶೇಷ ಕಾರ್ಯಕ್ರಮವನ್ನು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಸಂಸದರು, ಮುಖ್ಯಮಂತ್ರಿಗಳು ಮತ್ತು ರಾಜ್ಯ ಹಣಕಾಸು ಸಚಿವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮೋದಿ, ಲೋಕಸಭೆಯ ಸಭಾಪತಿ ಮತ್ತು ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡ ಜಿಎಸ್‌ಟಿ ಕಾರ್ಯಕ್ರಮದ ವೇದಿಕೆಯ ಮೇಲಿರಲಿದ್ದಾರೆ ಎಂದರು.
ಜುಲೈ 1 ರಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ತೆರಿಗೆ ನೀತಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಾವರಣಗೊಳಿಸಲಿದ್ದಾರೆ. ಜಿಎಸ್‌ಟಿ ಜಾರಿಯಿಂದಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಆದಾಯದಲ್ಲಿ ಹೆಚ್ಚಳವಾಗಲಿದೆ. ಆರಂಭದಲ್ಲಿ ಕೆಲ ಸಮಸ್ಯೆಗಳು ಎದುರಾಗಲಿವೆ ಎಂದು ಮಾಹಿತಿ ನೀಡಿದ್ದಾರೆ.
ಕೆಲ ರಾಜ್ಯಗಳು ಜಿಎಸ್‌ಟಿ ತೆರಿಗೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜುಲೈ 1 ರಿಂದ ದೇಶಾದ್ಯಂತ ಜಿಎಸ್‌ಟಿ ಜಾರಿಗೆ ಬರಲಿದೆ ಎಂದು ಹೇಳುತ್ತಲೇ ಬಂದಿದ್ದೇವೆ. ಕೆಲ ರಾಜ್ಯಗಳು ಜಾರಿಗೊಳಿಸದಿರಲು ಕಾರಣಗಳಿಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.