Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರಧಾನಿ ಮೋದಿ ನಿರ್ಣಯಗಳಿಗೆ ಗುಜರಾತ್ ಜನತೆ ವಿರೋಧ: ಖರ್ಗೆ

ಕಲಬುರಗಿ , ಬುಧವಾರ, 29 ನವೆಂಬರ್ 2017 (12:23 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ತೆಗೆದುಕೊಂಡ ನಿರ್ಣಯಗಳಿಗೆ ಗುಜರಾತ್ ಜನತೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ನಲ್ಲಿ ಮೋದಿ ವಿರೋಧಿ ಅಲೆ ಜೋರಾಗಿದೆ. ನೋಟು ನಿಷೇಧ, ಜಿಎಸ್‌ಟಿ ನಿರ್ಣಯಗಳಿಂದಾಗಿ ಮಧ್ಯಮ ವರ್ಗದವರಿಗೆ ತೀವ್ರ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಜರಾತ್‌ನಲ್ಲಿರುವ ಪ್ರತಿಯೊಬ್ಬ ನಾಯಕರನ್ನು ಜತೆಗೆ ಕರೆದುಕೊಂಡು ಸಾಗುತ್ತಿದ್ದಾರೆ. ಈ ಬಾರಿ ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಕಾರ ರಚಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ರಾಹುಲ್ ಗಾಂಧಿ ಗುಜರಾತ್‌ನಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಗುಜರಾತ್ ಜನತೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ. 

ಪ್ರಧಾನಿ ಮೋದಿ ನಿರ್ಣಯಗಳಿಗೆ ಗುಜರಾತ್ ಜನತೆ ವಿರೋಧ: ಖರ್ಗೆ
Gujarat people against Prime Minister Narendra Modi's decision: Kharge
ಪ್ರಧಾನಿ ಮೋದಿ, ಗುಜರಾತ್, ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, PM modi, gujarat, mallikarjun kharge, rahul gandhi
 
ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ತೆಗೆದುಕೊಂಡ ನಿರ್ಣಯಗಳಿಗೆ ಗುಜರಾತ್ ಜನತೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ನಲ್ಲಿ ಮೋದಿ ವಿರೋಧಿ ಅಲೆ ಜೋರಾಗಿದೆ. ನೋಟು ನಿಷೇಧ, ಜಿಎಸ್‌ಟಿ ನಿರ್ಣಯಗಳಿಂದಾಗಿ ಮಧ್ಯಮ ವರ್ಗದವರಿಗೆ ತೀವ್ರ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಜರಾತ್‌ನಲ್ಲಿರುವ ಪ್ರತಿಯೊಬ್ಬ ನಾಯಕರನ್ನು ಜತೆಗೆ ಕರೆದುಕೊಂಡು ಸಾಗುತ್ತಿದ್ದಾರೆ. ಈ ಬಾರಿ ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಕಾರ ರಚಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ರಾಹುಲ್ ಗಾಂಧಿ ಗುಜರಾತ್‌ನಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಗುಜರಾತ್ ಜನತೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಹವಾ ಕಡಿಮೆಯಾಗಿದೆ: ಸಿಎಂ ಸಿದ್ದರಾಮಯ್ಯ