ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಆರಂಭವಾಗಿದ್ದು, ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪ್ರತಿಷ್ಠೆಯ ಕಣವಾಗಿದೆ.
ತವರೂರು ಗುಜರಾತ್ ನಲ್ಲಿ ನಡೆಯುತ್ತಿರುವ ಚುನಾವಣೆಯನ್ನು ಗೆಲ್ಲಲೇಬೇಕೆಂಬ ಪ್ರತಿಷ್ಠೆ ಪ್ರಧಾನಿಗಾದರೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೇರುವ ಮೊದಲು ಬಿಜೆಪಿಯ ಭದ್ರ ಕೋಟೆಯನ್ನೇ ಮುರಿಯುವ ಜಿದ್ದಿನಲ್ಲಿ ಕಾಂಗ್ರೆಸ್ ಇದೆ.
ಒಟ್ಟು 89 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದ್ದು, ಉಳಿದ 93 ಕ್ಷೇತ್ರಗಳಿಗೆ ಡಿಸೆಂಬರ್ 13 ರ ನಂತರ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಇವಿಎಂ ಪ್ಯಾಡ್ ಅಂದರೆ ಮತದಾನ ಸರಿಯಾಗಿ ಆಗಿದೆಯೋ ಇಲ್ಲವೋ ಎಂದು ಸೂಚಿಸುವ ಯಂತ್ರಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ ನಡೆಯದಂತೆ ವ್ಯಾಪಕ ಭದ್ರತೆ ಒದಗಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ