Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಚುನಾವಣಾ ಆಯೋಗಕ್ಕೆ ಇಬ್ಬರು ಮುಖ್ಯಸ್ಥರು: ಅವರ ಹಿನ್ನಲೆ ವಿವರ ಇಲ್ಲಿದೆ

Election Commission

Krishnaveni K

ನವದೆಹಲಿ , ಗುರುವಾರ, 14 ಮಾರ್ಚ್ 2024 (16:29 IST)
WD
ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೇ ಪ್ರಧಾನಿ ಮೋದಿ ನೇತೃತ್ವದ ಸಮಿತಿ ಚುನಾವಣಾ ಆಯೋಗಕ್ಕೆ ನೂತನ ಮುಖ್ಯಸ್ಥರನ್ನು ನೇಮಕ ಮಾಡಿದೆ.

ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಈ ಪೈಕಿ ಜ್ಞಾನೇಶ್ ಕುಮಾರ್ ಕೇರಳ ಮೂಲದ ನಿವೃತ್ತ ಐಎಎಸ್ ಅಧಿಕಾರಿ. ಸುಖಬೀರ್ ಸಿಂಗ್ ಪಂಜಾಬ್ ಮೂಲದವರಾಗಿದ್ದಾರೆ. ಒಟ್ಟು 212 ಅಧಿಕಾರಿಗಳ ಹೆಸರು ಸೂಚಿಸಲಾಗಿತ್ತು. ಈ ಪೈಕಿ ಆರು ಮಂದಿಯನ್ನು ಶಾರ್ಟ್ ಲಿಸ್ಟ್ ಮಾಡಿ ಇಬ್ಬರನ್ನು ಆಯ್ಕೆ ಮಾಡಲಾಗಿದೆ.

ಆದರೆ ಈ ಆಯ್ಕೆ ಪ್ರಕ್ರಿಯೆ ಬಗ್ಗೆ ಆಯ್ಕೆ ಸಮಿತಿ ಸದಸ್ಯರಲ್ಲಿ ಒಬ್ಬರಾಗಿರುವ ಕಾಂಗ್ರೆಸ್ ನ ಅಧೀರ್ ರಂಜನ್ ಚೌಧರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾರ್ಟ್ ಲಿಸ್ಟ್ ಮಾಡಲಾದ ಹೆಸರುಗಳನ್ನು ನಮಗೆ ಮೊದಲೇ ತಿಳಿಸಿರಲಿಲ್ಲ. ಕೇವಲ 10 ನಿಮಿಷ ಮೊದಲಷ್ಟೇ ತಿಳಿಸಲಾಗಿದೆ. ಈ ಸಮಿತಿಯಲ್ಲಿ ಹೆಚ್ಚಿನವರು ಆಡಳಿತ ಪಕ್ಷದ ಸದಸ್ಯರೇ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರೂ ಇರಬೇಕಿತ್ತು. ಅಲ್ಲದೆ 200 ಹೆಸರುಗಳನ್ನು ಹೇಗೆ ಸೂಚಿಸಲಾಗಿದೆ ಎಂಬುದಕ್ಕೂ ಸ್ಪಷ್ಟತೆಯಿಲ್ಲ ಎಂದು ಆರೋಪಿಸಿದ್ದಾರೆ. ಇತ್ತೀಚೆಗಷ್ಟೇ ಅರುಣ್ ಗೊಯೆಲ್ ರಾಜೀನಾಮೆಯ ನಂತರ ಲೋಕಸಭೆ ಚುನಾವಣೆಗೆ ಮೊದಲು ನೂತನ ಚುನಾವಣಾ ಆಯೋಗದ ಮುಖ್ಯಸ್ಥರನ್ನು ನೇಮಕ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾ ಸಿಎನ್ ಮಂಜುನಾಥ್ ‘ಜಾಣ ಅಳಿಯ’ನೆಂದ ಡಿಕೆ ಸುರೇಶ್