ಬೆಂಗಳೂರು : ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ.
ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಲು ರಾಜ್ಯದಲ್ಲೂ ಸಕಲ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ, ಸರ್ಕಾರಿ, ಖಾಸಗಿ ಕಟ್ಟಡಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ ಇಟ್ಟುಕೊಳ್ಳಲಾಗಿದೆ.
ಈಗಾಗಲೇ ಧ್ವಜ ಮಾರಾಟ, ವಿತರಣೆ ಕಾರ್ಯ ಬಹುತೇಕ ಮುಗಿದಿದೆ. ಇಂದಿನಿಂದ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ವಾತಾವರಣ ನಿರ್ಮಾಣ ಆಗಲಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಚೇರಿಗಳಲ್ಲಿ ಈ ಮೂರು ದಿನಗಳಂದು ಪ್ರತಿ ದಿನ ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು. ಹಾಗೂ ಮನೆಗಳಲ್ಲಿ ಇಂದು ಬೆಳಗ್ಗೆ ಧ್ವಜಾರೋಹಣ ಮಾಡಿ 15ರವರೆಗೆ ಇರಿಸಬಹುದಾಗಿದೆ.