Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹರ್ಯಾಣದಲ್ಲಿ ಕಾಂಗ್ರೆಸ್ ಲೆಕ್ಕಾಚಾರ ಉಲ್ಟಾ: ಬಿಜೆಪಿಗೆ ಅಲ್ಪ ಮುನ್ನಡೆ

BJP-Congress

Krishnaveni K

ಹರ್ಯಾಣ , ಮಂಗಳವಾರ, 8 ಅಕ್ಟೋಬರ್ 2024 (10:14 IST)
ಹರ್ಯಾಣ: ಗ್ಯಾರಂಟಿ ಯೋಜನೆಗಳು ಮತ್ತು ಆಡಳಿತ ವಿರೋಧಿ ಅಲೆಯಿಂದಾಗಿ ಈ ಬಾರಿ ಕಾಂಗ್ರೆಸ್ ಹರ್ಯಾಣದಲ್ಲಿಸ್ಪಷ್ಟ ಬಹುಮತ ಪಡೆಯಲಿದೆ ಎಂಬ ಎಕ್ಸಿಟ್ ಪೋಲ್ ಭವಿಷ್ಯಗಳು ಯಾಕೋ ಸುಳ್ಳಾಗುವ ಲಕ್ಷಣ ಕಾಣುತ್ತಿದೆ.

ಹರ್ಯಾಣ ವಿಧಾನಸಭೆ ಚುನಾವಣೆ ಕೌಂಟಿಂಗ್ ಆರಂಭವಾಗಿದ್ದು, ಆರಂಭಿಕ ವರದಿ ಪ್ರಕಾರ ಬಿಜೆಪಿ ಅಲ್ಪ ಮುನ್ನಡೆಗಳಿಸಿದ್ದು ಕಾಂಗ್ರೆಸ್ ಪ್ರಬಲ ಪೈಪೋಟಿಯೊಡ್ಡುತ್ತಿದೆ. 90 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಸದ್ಯದ ವರದಿ ಪ್ರಕಾರ ಬಿಜೆಪಿ 43 ಮತ್ತು ಕಾಂಗ್ರೆಸ್ 41 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಚುನಾವಣೋತ್ತರ ಸಮೀಕ್ಷೆ ವರದಿಗಳ ಪ್ರಕಾರ ಹರ್ಯಾಣದಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಬಹುದು. ಬಿಜೆಪಿ ವಾಶ್ ಔಟ್ ಆಗಬಹುದು ಎಂದೇ ಹೇಳಲಾಗಿತ್ತು. ಆದರೆ ಸದ್ಯದ ವರದಿ ನೋಡಿದರೆ ಅದು ಹಾಗಿಲ್ಲ. ಇಲ್ಲಿಯೂ ಅತಂತ್ರ ಪರಿಸ್ಥಿತಿ ಬರುವ ಲಕ್ಷಣ ಕಾಣುತ್ತಿದೆ.

ಇನ್ನೊಂದೆಡೆ ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. 90 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 50, ಬಿಜೆಪಿ 23 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇಲ್ಲಿ ಪಿಡಿಪಿ 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರುವುದು ಬಹುತೇಕ ನಿಶ್ಚಿತ ಎನ್ನಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಪರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಮಂಡನೆಗೆ ಸಿದ್ಧವಾದ ಸರ್ಕಾರ