ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 20 ವರ್ಷದ ಯುವತಿಯನ್ನು ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಮಾಡಿದ ಪ್ರಕರಣ ಈಗ ಸಾಕಷ್ಟು ಅನುಮಾನಗಳನ್ನು ಸೃಷ್ಟಿಸುತ್ತಿದೆ.
ಯುವತಿಯ ಮೃತದೇಹವನ್ನು ಮಧ್ಯರಾತ್ರಿ ಪೊಲೀಸರೇ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಕುಟುಂಬಸ್ಥರಿಗೂ ಅವಕಾಶ ಕೊಟ್ಟಿಲ್ಲ ಎಂದು ಆರೋಪಿಸಲಾಗಿದೆ. ಯುವತಿಯ ಮೃತದೇಹವನ್ನು ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ದು ಪೊಲೀಸರೇ ತರಾತುರಿಯಲ್ಲಿ ಎಲ್ಲಾ ಪ್ರಕ್ರಿಯೆ ಮಾಡಿ ಮುಗಿಸಿರುವುದು ಈಗ ಅನುಮಾನಗಳಿಗೆ ಕಾರಣವಾಗಿದೆ.
ಅಲ್ಲದೆ, ಹತ್ರಾಸ್ ಪೊಲೀಸರು ಈ ಯುವತಿ ಮೇಲೆ ಅತ್ಯಾಚಾರ ನಡೆದೇ ಇರಲಿಲ್ಲ. ಆಕೆಯ ದೇಹದ ಮೇಲೆ ಅಂತಹ ಯಾವುದೇ ಗುರುತುಗಳಿರಲಿಲ್ಲ ಎಂದು ಹೇಳುತ್ತಿದ್ದಾರೆ. ಈ ಪ್ರಕರಣವೀಗ ದೇಶದಲ್ಲಿ ಸಂಚಲನ ಮೂಡಿಸುತ್ತಿದ್ದು, ಸೆಲೆಬ್ರಿಟಿಗಳೂ ಧ್ವನಿಯೆತ್ತಿದ್ದಾರೆ.