Webdunia - Bharat's app for daily news and videos

Install App

ಭಾರೀ ಮಳೆ : ಕೇದಾರನಾಥ ಯಾತ್ರೆ ರದ್ದು

Webdunia
ಬುಧವಾರ, 12 ಜುಲೈ 2023 (07:03 IST)
ಡೆಹ್ರಾಡೂನ್: ಭಾರೀ ಮಳೆ ಸುರಿಯುತ್ತಿರುವ ಕಾರಣ ಉತ್ತರಾಖಂಡದ ಸೋನ್ಪ್ರಯಾಗ ಮತ್ತು ಗೌರಿಕುಂಡ್ನಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋನ್ಪ್ರಯಾಗ್ ಮತ್ತು ಗೌರಿಕುಂಡ್ನಲ್ಲಿ ಪ್ರತಿಕೂಲ ಹವಾಮಾನ ಇರುವ ಕಾರಣ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಭಾರೀ ಮಳೆಯ ಪರಿಣಾಮ 4 ರಾಜ್ಯ ರಸ್ತೆ ಮತ್ತು 10 ಸಂಪರ್ಕ ರಸ್ತೆಗಳು ಮುಚ್ಚಿವೆ. ಅಲ್ಲದೇ ಧಾರಾಕಾರ ಮಳೆಯ ಪರಿಣಾಮ ಮಂದಾಕಿನಿ ಮತ್ತು ಅಲಕಾನಂದ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಭಾರೀ ಮಳೆ ಸುರಿಯುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ ಉತ್ತರಾಖಂಡದಲ್ಲಿ ಜುಲೈ 12ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಈ ಕುರಿತು ಟ್ವಿಟ್ಟರ್ನಲ್ಲಿ ಟ್ವೀಟ್ ಕೂಡಾ ಮಾಡಿದೆ. ಮಂಗಳವಾರ ಉತ್ತರಾಖಂಡದ ಗಂಗ್ನಾನಿ ಬಳಿಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಶೇಷಗಳು ಬಿದ್ದು ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments