ಲಕ್ನೋ : ಉತ್ತರ ಪ್ರದೇಶದಲ್ಲಿ ಕಳೆದ ಮೂರು ದಿನಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 10 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿವೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ, 34 ರಲ್ಲಿ 17 ಮಂದಿ ಸಿಡಿಲು ಬಡಿತದಿಂದ, 12 ಮಂದಿ ಮುಳುಗುವಿಕೆಯಿಂದ ಮತ್ತು ಐವರು ಭಾರೀ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿ, ಪ್ರಕೃತಿ ವಿಕೋಪಗಳಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವ ಭರವಸೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಈಗಾಗಲೇ 11 ಪ್ರತಿಶತ ಅಧಿಕ ಮಳೆಯಾಗಿದೆ. ಇದು ನದಿಯ ನೀರಿನ ಮಟ್ಟದಲ್ಲಿ ಏರಿಕೆಗೆ ಕಾರಣವಾಗಿದೆ. ತಗ್ಗು ಪ್ರದೇಶಗಳನ್ನು ಜಲಾವೃತಗೊಂಡಿದೆ.