Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಶಾಲೆ, ಕಾಲೇಜುಗಳ ತರಗತಿಯಲ್ಲಿ ಹಿಜಬ್ ನಿಷೇಧಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದ್ದಾರೆ.
ಇಂದು ಕಲಾಪ ಆರಂಭದಲ್ಲಿ ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್, ವಿಚಾರಣೆ ವಿಳಂಬವಾಗುತ್ತಿರುವುದನ್ನು ಪ್ರಸ್ತಾಪಿಸಿದರು. ಹೆಣ್ಣು ಮಕ್ಕಳು ಶಿಕ್ಷಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮುಂದಿನ ವಾರ ಸೂಕ್ತ ಪೀಠದಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಭರವಸೆ ನೀಡಿದರು.