Publish Date: Mon, 14 Aug 2017 (08:34 IST)
Updated Date: Mon, 14 Aug 2017 (08:38 IST)
ಶಿಮ್ಲಾ: ಹಿಮಾಚಲ ಪ್ರದೇಶದ ಮಾಂದಿ ಜಿಲ್ಲೆಯಲ್ಲಿ ಭೂ ಕುಸಿತವಾದ ಪರಿಣಾಮ ಸುಮಾರು 48 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ.
ಎರಡು ಬಸ್ ಗಳ ಮೇಲೆ ಮಣ್ಣು ಸುರಿದಿದ್ದರಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಜೀವಂತ ಸಮಾಧಿಯಾಗಿದ್ದಾರೆಂದು ಅಂದಾಜಿಸಲಾಗಿದೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದೆಂದು ಅಂದಾಜಿಸಲಾಗಿದೆ. ನಿನ್ನೆ ಕೆಲವು ಗಂಟೆಗಳ ಕಾಲ ಪರಿಹಾರ ಕಾರ್ಯಾಚರಣೆ ನಡೆಸಿದ ರಕ್ಷಣಾ ಸಿಬ್ಬಂದಿ ಮತ್ತೆ ಭೂ ಕುಸಿತವಾಗುವ ಭೀತಿಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಇಂದು ಮತ್ತೆ ಮರಳಲಿದೆ. ಮೃತರ ಪೈಕಿ ಕೇವಲ 23 ಮೃತದೇಹಗಳನ್ನು ಗುರುತಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ