ನವದೆಹಲಿ: ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಮುಂದಾಗಿರುವ ಗಾಂಧಿವಾದಿ, ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನನ್ನ ಹೋರಾಟದಿಂದ ಇನ್ನೊಬ್ಬ ಕೇಜ್ರಿವಾಲ್ ಹುಟ್ಟಿಕೊಳ್ಳದಿದ್ದರೆ ಸಾಕು ಎಂದು ಹೇಳಿದ್ದಾರೆ.
2011 ರಲ್ಲಿ ಅಣ್ಣಾ ಹಜಾರೆ ಯುಪಿಎ ಸರ್ಕಾರದ ವಿರುದ್ಧ ಜನ ಲೋಕಪಾಲ್ ಮಸೂದೆ ಜಾರಿಗೆ ತರುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಲಾ ಹಜಾರೆ ಜತೆಗಿದ್ದು ರಾಜಕೀಯ ಲಾಭ ಪಡೆದರು.
ನಂತರ ತಮ್ಮದೇ ಪಕ್ಷ ಸ್ಥಾಪಿಸಿ ಕೇಜ್ರಿವಾಲ್ ದೆಹಲಿ ಸಿಎಂ ಆದರು. ಇದೀಗ ಮತ್ತೆ ಹೋರಾಟಕ್ಕಿಳಿದಿರುವ ಅಣ್ಣಾ ಹಜಾರೆ ತನ್ನ ಹೋರಾಟವನ್ನು ಬೆಂಬಲಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದು, ಮತ್ತೊಬ್ಬ ಕೇಜ್ರಿವಾಲ್ ನ ಉದಯವಾಗದಿರಲಿ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ