ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರರೂಢವಾಗಿರುವ ಬಿಜೆಪಿ ಸರಕಾರ, ವಿಪಕ್ಷಗಳ ಶಾಸಕರ ಖರೀದಿಯಲ್ಲಿ ತೊಡಗಿದೆ ಎಂದು ಆರೋಪಿಸಿ ಚುನಾವಣೆ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಬಿಜೆಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಿಯೋಗ ಇಂದು ಸಂಜೆ ಕೇಂದ್ರ ಚುನಾವಣೆ ಆಯುಕ್ತರನ್ನು ಭೇಟಿ ಮಾಡಲಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಗುಜರಾತ್‌ನ ಆರು ಕಾಂಗ್ರೆಸ್ ಶಾಸಕರ ಮೇಲೆ ಒತ್ತಡ ಹೇರಿ ರಾಜೀನಾಮೆ ಕೊಡಿಸಿ, ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅಧಿಕಾರ ಬಲದಿಂದ ವಿಪಕ್ಷಗಳ ಶಾಸಕರ ಮೇಲೆ ಒತ್ತಡ ಹೇರಿ ಪಕ್ಷಾಂತರಕ್ಕೆ ಪ್ರಚೋದಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.