ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ನಡೆಯುತ್ತಿದ್ದು, ಇದರ ಮೊದಲ ಭಾಗವಾಗಿ ಕಾರ್ಯಕಾರಿ ಸಮಿತಿಯನ್ನು ಬದಲು ಮಾಡಿದ್ದಲ್ಲದೇ ಕೇಂದ್ರ ಚುನಾವಣಾ ಪ್ರಾಧಿಕಾರವನ್ನು ಪುನರಚನೆ ಮಾಡಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಈ ನೂತನ ಆದೇಶ ಹೊರಡಿಸಿದ್ದು, ಇದರಲ್ಲಿ ರಾಜ್ಯದ ಉಸ್ತುವಾರಿ ಹೊತ್ತಿದ್ದ ಕೆ.ಸಿ.ವೇಣುಗೋಪಾಲ್ ಗೆ ಕೋಕ್ ನೀಡಲಾಗಿದ್ದು, ರಣದೀಪ್ ಸಿಂಗ್ ಸುರ್ಜೆವಾಲ್ ಗೆ ರಾಜ್ಯ ಉಸ್ತುವಾರಿಯ ಹೊಣೆ ವಹಿಸಲಾಗಿದೆ.
ದಿನೇಶ್ ಗುಂಡೂರಾವ್ ಅವರಿಗೆ ಗೋವಾ,ತಮಿಳುನಾಡು, ಪಾಂಡಿಚೇರಿಉಸ್ತುವಾರಿವಹಿಸಲಾಗಿದೆ.