ದೇಶ – ವಿದೇಶಗಳ ಆಟಿಕೆ ತಯಾರಕರು ಇನ್ಮುಂದೆ ರಾಜ್ಯದ ಕಡೆ ಮುಖ ಮಾಡುವ ಲಕ್ಷಣಗಳು ಸ್ಪಷ್ಟವಾಗಿ ಗೋಚರವಾಗಿವೆ.
ರಾಜ್ಯದ ಕೊಪ್ಪಳ ಜಿಲ್ಲೆಯಲ್ಲಿ 400 ಎಕರೆ ಜಮೀನಿನಲ್ಲಿ ಬೃಹತ್ ಗೊಂಬೆಗಳ ತಯಾರಿಕಾ ಕ್ಲಸ್ಟರ್ ಶುರುವಾಗಲಿದೆ.
ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಆತ್ಮನಿರ್ಭರ್ ಭಾರತ್ ಯೋಜನೆಯಡಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಯಡಿಯೂರಪ್ಪ ಟ್ವಿಟ್ ಮಾಡಿದ್ದಾರೆ.
ಸ್ವಾವಲಂಬಿ ರಾಷ್ಟ್ರ ನಿರ್ಮಾಣದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ #VocalForLocal ಪರಿಕಲ್ಪನೆಗೆ ಅನುಗುಣವಾಗಿ, ಆಟಿಕೆ ತಯಾರಿಕೆ ಮೂಲಕ ಆರ್ಥಿಕತೆ ಹಾಗು ಉದ್ಯೋಗಸೃಷ್ಟಿಗೆ ಬಲ ತುಂಬಲು ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ದೇಶವಿದೇಶಗಳ ಆಟಿಕೆ ತಯಾರಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು.