Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಶಿಲ್ಲಾಂಗ್ : ಮೇಘಾಲಯದ ರಿ-ಭೋಯ್ ಜಿಲ್ಲೆಯಲ್ಲಿ ಗುರುವಾರ ಚಂಡಮಾರುತವು ಭಾರೀ ಹಾನಿಯನ್ನುಂಟು ಮಾಡಿದೆ.
ಚಂಡಮಾರುತದ ಪರಿಣಾಮ ಸುಮಾರು 1000ಕ್ಕೂ ಹೆಚ್ಚು ಮನೆಗಳು ಧ್ವಂಸಗೊಂಡಿದೆ. ಜಿಲ್ಲೆಯ 47 ಗ್ರಾಮಗಳು ಚಂಡಮಾರುತದಿಂದ ಹಾನಿಗೊಳಗಾಗಿದೆ. ಅನೇಕ ಮನೆಗಳಿಗೆ ಹಾನಿ ಉಂಟಾಗಿದೆ.
ಜೊತೆಗೆ ಬಿಡಿಒ ಕಚೇರಿ, ಶಾಲೆ, ಲೋಕೋಪಯೋಗಿ ಇಲಾಖೆ ಕಚೇರಿ, ಪಶುವೈದ್ಯಕೀಯ ಕಚೇರಿಗಳು ಸೇರಿದಂತೆ ಸರ್ಕಾರಿ ಆಸ್ತಿ, ಪಾಸ್ತಿಗಳು ಚಂಡಮಾರುತದಿಂದ ನಾಶಗೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.