Publish Date: Tue, 16 Mar 2021 (07:42 IST)
Updated Date: Tue, 16 Mar 2021 (07:43 IST)
ಮಹಾರಾಷ್ಟ್ರ : ನಿರುದ್ಯೋಗಿ ಪತಿಯೊಬ್ಬ ತನ್ನ ಅನಾರೋಗ್ಯ ಪೀಡಿತ ಪತ್ನಿಗೆ ನೀಡುತ್ತಿದ್ದ ವೈದ್ಯಕೀಯ ಚಿಕಿತ್ಸೆಯನ್ನು ನಿಭಾಯಿಸಲು ಸಾಧ್ಯವಾಗದೆ ಆಕೆಯನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪರಭಾನಿಯಲ್ಲಿ ನಡೆದಿದೆ.
ಪತ್ನಿಗೆ ಬ್ರೈನ್ ಟ್ಯೂಮರ್ ಇತ್ತು. ನಿರುದ್ಯೋಗಿಯಾಗಿದ್ದ ಪತಿಗೆ ಅವಳಿಗೆ ಚಿಕಿತ್ಸೆ ನೀಡಲು ಆಗದೆ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ವಿಚಾರ ತಿಳಿದ ಸ್ಥಳೀಯರು ಪೊಲೀಸರಿಗೆ ತಿಳಿಸಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.