Publish Date: Fri, 09 Apr 2021 (10:10 IST)
Updated Date: Fri, 09 Apr 2021 (10:28 IST)
ಮಹಾರಾಷ್ಟ್ರ : ಜೈಲಿನಿಂದ ಜಾಮೀನು ಪಡೆದು ಹೊರಗೆ ಬಂದ 34 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಆರೋಪಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಸ್ವಲ್ಪ ದಿನ ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ.
ಮನೆಗೆ ಬಂದ ಆತ ಪತ್ನಿ ತನ್ನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಆಕೆ ಒಬ್ಬ ಪೊಲೀಸ್ ಇನ್ ಫಾರ್ಮರ್ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಆತನ ಮೇಲೆ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.