Publish Date: Wed, 26 May 2021 (10:37 IST)
Updated Date: Wed, 26 May 2021 (10:49 IST)
ಸೂರತ್ : ಗುಜರಾತ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಆಕೆಯ ಪ್ರೇಮಿಯನ್ನು ಒಟ್ಟಿಗೆ ಕಟ್ಟಿಹಾಕಿ ಥಳಿಸಿದ್ದಾನೆಂದು ಆರೋಪಿಸಲಾಗಿದೆ.
ಗುಜರಾತ್ ನ ವಲ್ಸಾದ್ ಜಿಲ್ಲೆಯ ಗ್ರಾಮವೊಧಂರಲ್ಲಿ ಈ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದೆ. ಆರೋಪಿ ತನ್ನ ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂದು ಶಂಕಿಸಿದ್ದಾನೆ. ಇದಕ್ಕೆ ಪತ್ನಿ ಅದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದ್ದಾಳೆ. ಇದರಿಂದ ಪತ್ನಿಯ ಮೇಲೆ ಕಣ್ಣಿಟ್ಟಿದ್ದ ಆತ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಮನಯ ಹೊರಗೆ ಕಟ್ಟಿ ಹಾಕಿ ಥಳಿಸಿದ್ದಾನೆ.
ಇದನ್ನು ಸ್ಥಳೀಯರು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ಮಹಿಳೆ ಹಾಗೂ ಆಕೆಯ ಪ್ರಿಯಕರ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ.