ಕಾನ್ಪುರ : ವಿವಾಹೇತರ ಸಂಬಂಧವನ್ನು ವಿರೋಧಿಸಿದಕ್ಕೆ ಒಂಬತ್ತು ತಿಂಗ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ ಘಟನೆ ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಬೇರೆ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಈ ವಿಚಾರ ಪತ್ನಿಗೆ ತಿಳಿದುಬಂದಿದೆ. ಇದಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ಹಿನ್ನಲೆಯಲ್ಲಿ ಪತಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಕರೆದುಕೊಂಡು ಹೋಗಿ ಇಟ್ಟಿಗೆಯಿಂದ ಹೊಡೆದು ಕೊಂದು ಶವವನ್ನು ಸುಟ್ಟು ಹಾಕಿದ್ದಾನೆ.
ಸುಟ್ಟ ಶವ ಪತ್ತೆಯಾದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ.