Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ಪತ್ನಿಯನ್ನು ಕೊಲೆ ಮಾಡಿದ ಪತಿ ಆಕೆಯ ಮೃತದೇಹವನ್ನು ಬಾತ್ ರೂಂನಲ್ಲಿ ಬಚ್ಚಿಟ್ಟು ಬಳಿಕ ಪೊಲೀಸರಿಗೆ ಶರಣಾದ ಘಟನೆ ದೆಹಲಿಯಲ್ಲಿ ನಡೆದಿದೆ.
ದಂಪತಿಗೆ ಇದು ಎರಡನೇ ಮದುವೆಯಾಗಿತ್ತು. ಇಬ್ಬರಿಗೂ ಮದುವೆಯಾಗಿ ಮೊದಲ ಸಂಬಂಧದಲ್ಲಿ ಮಕ್ಕಳೂ ಇದ್ದರು. ಈ ಮಕ್ಕಳನ್ನು ನೋಡಿಕೊಳ್ಳುವ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪವಿತ್ತು. ಇದೇ ಆಕ್ರೋಶದಲ್ಲಿ ಆರೋಪಿ ಪತ್ನಿಯನ್ನು ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನು ಬಾತ್ ರೂಂನಲ್ಲಿಟ್ಟು ಒಂದು ರಾತ್ರಿ ಕಳೆದಿದ್ದ.
ಕೊನೆಗೆ ಮಣ್ಣು ಮಾಡುವುದು ಹೇಗೆಂದು ತೋಚದೇ ಮರುದಿನ ಸೀದಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.