ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 2 ಕೋಟಿ ರೂಪಾಯಿ ಲಂಚದ ಹಣವನ್ನು ಪಡೆದಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ಮಾಜಿ ಸಚಿವ ಕಪಿಲ್ ಮಿಶ್ರಾ ಗಂಭೀರ ಆರೋಪ ಮಾಡಿದ್ದಾರೆ.
ಸಚಿವ ಸ್ಥಾನದಿಂದ ವಜಾಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತ್ಯೇಂದ್ರ ಜೈನ್ ಅವರಿಂದ ಕೇಜ್ರಿವಾಲ್ 2 ಕೋಟಿ ರೂಪಾಯಿ ಹಣ ಪಡೆದಿದ್ದಾರೆ. ಹಣವನ್ನು ಯಾಕೆ ಪಡೆದಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದರು.
ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದೇನೆ. ಕೇಜ್ರಿವಾಲ್ ಎರಡು ಕೋಟಿ ರೂಪಾಯಿ ಲಂಚ ಪಡೆದಿರುವ ಬಗ್ಗೆ ಎಸಿಬಿ ಮತ್ತು ಸಿಬಿಐಗೆ ಮಾಹಿತಿ ನೀಡುತ್ತೇನೆ. ಉಪರಾಜ್ಯಪಾಲರಿಗೆ ಲಂಚದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಸಂಪುಟದಲ್ಲಿ ಬಹುತೇಕ ಸಚಿವರು ಲಂಚದ ಧಂಧೆ ನಡೆಸುತ್ತಿದ್ದಾರೆ.ಅಂತಹ ಸಚಿವರ ಇತಿಹಾಸ ಬಯಲುಗೊಳಿಸುತ್ತೇನೆ ಎಂದು ಮಾಜಿ ಜಲ ಖಾತೆ ಸಚಿವ ಕಪಿಲ್ ಮಿಶ್ರಾ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.