ಶ್ರೀನಗರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಒಪ್ಪಿಕೊಂಡಿದ್ದಾರೆ.
ಭಾರತ ಪ್ರಗತಿಯತ್ತ ಸಾಗಲು ಮತ್ತು ಬದಲಾವಣೆಗಾಗಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ. ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವ ಯಾರೊಂದಿಗಾದರೂ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ಭಾವಿಸಿದ್ದೇನೆ. ಹಾಗಾಗಿ ಭಾರತ್ ಜೋಡೋ ಯಾತ್ರೆಗೆ ಜೊತೆಯಾಗುತ್ತೇನೆ.
ಭಾರತದ ಪ್ರಗತಿಗಾಗಿ ಹೆಜ್ಜೆ ಇಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.