ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನತೆಯ ಸಲಹೆ ಪಡೆದು ಚುನಾವಣೆಗೆ ಸ್ಪರ್ಧಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಚುನಾವಣೆಗೆ ಸ್ಪರ್ಧಿಸುವುದಾದಲ್ಲಿ ಮೂರು ತಿಂಗಳು ಮುಂಚಿತವಾಗಿಯೇ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಶೀಘ್ರದಲ್ಲಿಯೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದವರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿಗರು ಪ್ರತಿಭಟನೆಯ ಮೊದಲು ಎಂಎಲ್ಸಿ ಗೋವಿಂದರಾಜು ಮನೆಯಲ್ಲಿ ಡೈರಿ ಸಿಕ್ಕಿರುವುದು ಸತ್ಯ, ಅಥವಾ ಸುಳ್ಳು ಎನ್ನುವುದನ್ನು ಜನತೆಯ ಮುಂದಿಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲ್ ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.