Webdunia - Bharat's app for daily news and videos

Install App

ಗಾಂಧಿ ಜಯಂತಿ ರಾಷ್ಟ್ರೀಯ ಹಬ್ಬವಾಗಿದ್ದು ಯಾವಾಗ, ಮಹತ್ವವೇನು

Krishnaveni K
ಬುಧವಾರ, 2 ಅಕ್ಟೋಬರ್ 2024 (08:38 IST)
ಬೆಂಗಳೂರು: ಇಂದು ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜನ್ಮ ಜಯಂತಿಯನ್ನು ಆಚರಿಸಲಾಗುತ್ತಿದೆ. ಹಾಗಿದ್ದರೆ ಗಾಂಧಿ ಜಯಂತಿ ಆಚರಣೆ ಆರಂಭವಾಗಿದ್ದು ಯಾವಾಗ ಇದರ ಮಹತ್ವವೇನು ತಿಳಿದುಕೊಳ್ಳೋಣ.

ಅಹಿಂಸಾ ತತ್ವದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿದ್ದ ಮಹಾತ್ಮಾ ಗಾಂಧೀಜಿ ಹುಟ್ಟಿದ್ದು 1869 ರ ಅಕ್ಟೋಬರ್ 2 ರಂದು ಗುಜರಾತ್ ನ ಫೋರ್ ಬಂದರ್ ನಲ್ಲಿ. ವೃತ್ತಿಯಲ್ಲಿ ವಕೀಲರಾಗಿದ್ದ  ಗಾಂಧೀಜಿ ಆಫ್ರಿಕಾದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ವಿರುದ್ಧ ಹೋರಾಟದ ಮೂಲಕ ಗಮನ ಸೆಳೆದರು.

ಬಳಿಕ ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದರು. ಮಹಾತ್ಮಾ ಗಾಂಧೀಜಿಯವರ ಅನೇಕ ತತ್ವಗಳು ನಮ್ಮ ಜೀವನಕ್ಕೆ ಆದರ್ಶವಾಗಬೇಕಿದೆ. ಅವರು ಭಾರತವನ್ನು ರಾಮ ರಾಜ್ಯವನ್ನಾಗಿ ಮಾಡುವ ಕನಸು ಕಂಡವರು. ಭಾರತದ ಗ್ರಾಮೀಣ ಭಾಗದ ಅಭಿವೃದ್ಧಿಯ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟವರು.

1948 ರ ಜನವರಿ 30 ರಂದು ಗಾಂಧೀಜಿಯವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಅವರ ಸಾವಿನ ಬಳಿಕ ಅವರ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಮಂದಿ ಸೇರಿದ್ದು ಇಂದಿಗೂ ಒಂದು ದಾಖಲೆಯೇ ಸರಿ. ಅವರ ಗೌರವಾರ್ಥ ಅವರ ಸಾವಿನ ಬಳಿಕ 1948 ರಲ್ಲಿ ಅವರ ಜನ್ಮದಿನವನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಬೇಕೆಂದು ಸರ್ಕಾರ ಘೋಷಣೆ ಮಾಡಿತು.

ಗಾಂಧೀಜಿಯವರ ಆದರ್ಶದಂತೆ ಅಂದು ಸಮಾಜದ ಸ್ವಾಸ್ಥ್ಯಕ್ಕಾಗಿ ಸ್ವಚ್ಛತಾ ಅಭಿಯಾನವನ್ನು ಮಾಡುವ ಮೂಲಕ, ಅವರ ತತ್ವ, ಸಿದ್ಧಾಂತಗಳನ್ನು ಪಸರಿಸುವ ಮೂಲಕ ಅವರ ಜನ್ಮದಿನವನ್ನು ಆಚರಿಸಲಾಗುತ್ತದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ಇಡೀ ವಿಶ್ವದಾದ್ಯಂತ ಇಂದು ಗಾಂಧೀಜಿಗೆ ಗೌರವ ಸಲ್ಲಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments