Webdunia - Bharat's app for daily news and videos

Install App

ಗುಜರಾತ್‌ನಲ್ಲಿ ಮದ್ಯನಿಷೇಧವಿದ್ದರೂ ಕಂಠಪೂರ್ತಿ ಕುಡಿದು ನಿಂದಿಸಿದ ಉಪಮುಖ್ಯಮಂತ್ರಿ ಪುತ್ರ

Webdunia
ಮಂಗಳವಾರ, 9 ಮೇ 2017 (17:54 IST)
ಗುಜರಾತ್ ರಾಜ್ಯದಲ್ಲಿ ಮದ್ಯ ನಿಷೇಧ ಜಾರಿಯಲ್ಲಿದ್ದರೂ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಪುತ್ರ ಅತಿಯಾದ ಮದ್ಯ ಸೇವಿಸಿ ಕತಾರ್ ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ವಾಗ್ವಾದದಲ್ಲಿ ತೊಡಗಿದ್ದರಿಂದ ವಿಮಾನದಲ್ಲಿ ಪ್ರಯಾಣಿಸುವುದಕ್ಕೆನಿರಾಕರಿಸಲಾಗಿದೆ
 
ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಪುತ್ರ 30 ವರ್ಷ ವಯಸ್ಸಿನ ಜೈಮನ್ ಪಟೇಲ್, ತಮ್ಮ ಪತ್ನಿ ಝಲಕ್ ಮತ್ತು ಪುತ್ರಿ ವೈಶವಿಯೊಂದಿಗೆ ಇಂದು ಬೆಳಗಿನ ಜಾವ 4 ಗಂಟೆಗೆ ಹೊರಡುವ ಕತಾರ್ ಏರ್‌ವೇಸ್ ವಿಮಾನದ ಮೂಲಕ ಗ್ರೀಸ್ ಪ್ರವಾಸಕ್ಕೆ ತೆರಳಬೇಕಾಗಿತ್ತು. ಆದರೆ, ಅತಿಯಾಗಿ ಮದ್ಯ ಸೇವಿಸಿದ್ದರಿಂದ ವಿಮಾನದಲ್ಲಿ ಪ್ರಯಾಣಿಸಲು ನಿರಾಕರಿಸಲಾಯಿತು. 
 
ರಿಯಲ್ ಎಸ್ಟೇಟ್ ಉದ್ಯಮಿಯಾದ ಜೈಮನ್ ಪಟೇಲ್, ಅತಿಯಾಗಿ ಮದ್ಯ ಸೇವಿಸಿ ನಡೆದಾಡಲು ಬಾರದ ಸ್ಥಿತಿಯಿಂದಾಗಿ ವ್ಹೀಲ್‌ಚೇರ್‌ನಲ್ಲಿ ಕುಳಿತು ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿ ಬ್ಯಾಗ್‌ಗಳ ತಪಾಸಣೆ ಕಾರ್ಯವನ್ನು ಪೂರ್ಣಗೊಳಿಸಿದರು ಎನ್ನಲಾಗಿದೆ. 
 
ಜೈಮನ್ ಪಟೇಲ್ ಅತಿಯಾಗಿ ಮದ್ಯ ಸೇವಿಸಿದ್ದರಿಂದ ಅವರಿಗೆ ವಿಮಾನದೊಳಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಏರ್‌ವೇಸ್ ಸಿಬ್ಬಂದಿಗಳು ತಿಳಿಸಿದ್ದಾರೆ
 
ಏತನ್ಮಧ್ಯೆ, ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ನಿತಿನ್ ಪಟೇಲ್, ಇದೊಂದು ನಮ್ಮ ಹೆಸರಿಗೆ ಮಸಿ ಬಳೆಯುವ ತಂತ್ರವಾಗಿದೆ. ನನ್ನ ಪುತ್ರನ ಆರೋಗ್ಯ ಸರಿಯಾಗಿರಲಿಲ್ಲ. ತನ್ನ ಕುಟುಂಬದೊಂದಿಗೆ ಗ್ರೀಸ್‌ಗೆ ತೆರಳುತ್ತಿದ್ದನು ಎಂದು ತಿಳಿಸಿದ್ದಾರೆ. 
 
ನಮ್ಮ ರಾಜಕೀಯ ವಿರೋಧಿಗಳು ಸುಳ್ಳು ಮತ್ತು ತಪ್ಪು ಮಾಹಿತಿ ಹರಡಿಸಿ ಕಳಂಕ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ತಿರುಗೇಟು ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments