ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಳೆಯ 500 ಮತ್ತು 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೀಡಿ ರೋಗಿಗಳು ಚಿಕಿತ್ಸೆಯನ್ನು ಪಡೆಯಬಹುದು. ಒಂದು ವೇಳೆ ಆಸ್ಪತ್ರೆಗಳಲ್ಲಿ ಹಳೆಯ ನೋಟುಗಳನ್ನು ಸ್ವೀಕರಿಸಲು ಒಪ್ಪದಿದ್ದರೆ ಆರೋಗ್ಯ ಇಲಾಖೆ ಆಡಳಿತ ವರ್ಗ ಅಥವಾ 104ನ್ನು ಸಂಪರ್ಕಿಸಿ ಸೂಕ್ತ ಸಲಹೆಯನ್ನು ಪಡೆಯಬಹುದು.
ಜತೆಗೆ 108ಕ್ಕೆ ಕರೆ ಮಾಡಿದರೆ ಸೂಕ್ತ ಚಿಕಿತ್ಸೆ ದೊರೆಯುವ ಆಸ್ಪತ್ರೆಗೆ ದಾಖಲು ಮಾಡುವ ಸೌಲಭ್ಯವನ್ನು ಪಡೆಯಬಹುದು.
ನೋಟು ನಿಷೇಧದಿಂದ ರೋಗಿಗಳು ಸೂಕ್ತ ಚಿಕಿತ್ಸೆ ಪಡೆಯಲು ಪರದಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ 500 ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲೇಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ