Publish Date: Fri, 28 Aug 2020 (14:45 IST)
Updated Date: Fri, 28 Aug 2020 (14:48 IST)
ಕಾಂಗ್ರೆಸ್ ಪಕ್ಷದಲ್ಲಿ ಇಷ್ಟುದಿನ ಇದ್ದ ಮುಸುಕಿನ ಗುದ್ದಾಟ ಇದೀಗ ಬಹಿರಂಗವಾಗತೊಡಗಿದೆ.
ಎಐಸಿಸಿ ಅಧ್ಯಕ್ಷ ಸ್ಥಾನ ಹಾಗೂ ಪಕ್ಷದ ಬಲವರ್ಧನೆ ಕುರಿತು ಹೈಕಮಾಂಡ್ ತಾಳಿರುವ ನಿಲುವಿಗೆ ಕೈ ಪಡೆಯ ಹಿರಿಯ ಮುಖಂಡರೇ ತಿರುಗಿ ಬಿದ್ದಿದ್ದಾರೆ.
ಕಾಂಗ್ರೆಸ್ ನಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಅಧ್ಯಕ್ಷರನ್ನು ಆಂತರಿಕ ಚುನಾವಣೆ ನಡೆಸಿ ಆಯ್ಕೆ ಮಾಡಬೇಕು.
ಇಲ್ಲದಿದ್ದರೆ ಇನ್ನೂ 50 ವರ್ಷಗಳವರೆಗೆ ಕೈ ಪಡೆ ವಿರೋಧ ಪಕ್ಷದ ಸ್ಥಾನದಲ್ಲೇ ಕುಳಿತುಕೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ.