ಡೋಕ್ಲಾಂ ಬಿಕ್ಕಟ್ಟು ಅಂತ್ಯಗೊಳಿಸಲು ಭಾರತ ಮತ್ತು ಚೀನಾ ದೇಶಗಳು ಗಡಿಯಲ್ಲಿನ ಸೇನಾ ಪಡೆಗಳನ್ನು ಹಿಂಪಡೆದುಕೊಳ್ಳಲು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ.
ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರರಾದ ರವೀಶ್ ಕುಮಾರ್ ಟ್ವೀಟ್ ಮಾಡಿ, ಉಭಯ ದೇಶಗಳು ಸೇನಾಪಡೆಗಳನ್ನು ಹಿಂಪಡೆಯುವ ಬಗ್ಗೆ ಸಮ್ಮತಿ ಸೂಚಿಸಿವೆ ಎಂದು ತಿಳಿಸಿದ್ದಾರೆ.
ಡೋಕ್ಲಾಂ ವಿವಾದ ಕುರಿತಂತೆ ಉಭಯ ದೇಶಗಳ ರಾಯಭಾರಿಗಳು ನಿರಂತರ ಸಂಪರ್ಕದಲ್ಲಿದ್ದರು. ದೇಶದ ಹಿತಾಸಕ್ತಿ, ಮತ್ತು ಕಳವಳದ ಬಗ್ಗೆ ಚೀನಾಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿವೆ.
ಭಾರತ ಮತ್ತು ಚೀನಾ ಸೇನಾಪಡೆಗಳು ಡೋಕ್ಲಾಂನಿಂದ ಸೇನಾಪಡೆಗಳನ್ನು ಹಿಂಪಡೆಯಲು ಆರಂಭಿಸಿದ್ದು, ಕೆಲ ತಿಂಗಳುಗಳಿಂದ ನಡೆಯುತ್ತಿರುವ ಭಾರಿ ವಿವಾದ ಅಂತ್ಯಗೊಂಡಂತಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.