ನವದೆಹಲಿ: ಭಾರತದಲ್ಲಿ ಮಹಿಳೆಯರನ್ನು ದೇವರ ಸ್ಥಾನದಲ್ಲಿ ಪೂಜಿಸಲಾಗುತ್ತದೆ ಎಂಬುದು ನಮ್ಮ ನಂಬಿಕೆ. ಆದರೆ ಥಾಮ್ಸನ್ ರಾಯಿಟರ್ಸ್ ಫೌಂಡೇಶನ್ ನಡೆಸಿರುವ ಸಮೀಕ್ಷೆಯಲ್ಲಿ ಭಾರತ ಮಹಿಳೆಯರಿಗೆ ಅಪಾಯಕಾರಿ ಎನ್ನಲಾಗಿದೆ.
ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಭಾರತ, ಸಿರಿಯಾ, ಅಫ್ಘಾನಿಸ್ತಾನದಂತಹ ರಾಷ್ಟ್ರಗಳಿಗಿಂತಲೂ ಅಪಾಯಕಾರಿ. ಮಹಿಳೆಯರಿಗೆ ಅಪಾಯಕಾರಿ ರಾಷ್ಟ್ರಗಳ ಪೈಕಿ ಭಾರತಕ್ಕೇ ಈ ಫೌಂಡೇಶನ್ ಮೊದಲ ಸ್ಥಾನ ನೀಡಿದೆ.
ಆದರೆ ಭಾರತ ಈ ವರದಿಯನ್ನು ತಿರಸ್ಕರಿಸಿದೆ. ಮಹಿಳಾ ಆಯೋಗದ ಅಧ್ಯಕ್ಷ ರೇಖಾ ಶರ್ಮಾ ಈ ವರದಿಯನ್ನು ಇಡೀ ದೇಶದ ಪ್ರಾತಿನಿಧ್ಯ ಎಂದು ಪರಿಗಣಿಸಲಾಗದು ಎಂದಿದ್ದಾರೆ. ಅತ್ತ ಕಾಂಗ್ರೆಸ್ ರಾಹುಲ್ ಗಾಂಧಿ ಇದೇ ವಿಚಾರವನ್ನಿಟ್ಟುಕೊಂಡು ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.