Webdunia - Bharat's app for daily news and videos

Install App

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

Krishnaveni K
ಭಾನುವಾರ, 11 ಮೇ 2025 (18:24 IST)
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಕೆಣಕಿದರೆ ಪ್ರತಿದಾಳಿ ನಡೆಸಲು ಭಾರತೀಯ ಸೇನೆಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ.

ನಿನ್ನೆ ಸಂಜೆ 5 ಗಂಟೆಯಿಂದ ಅಮೆರಿಕಾ ಸಲಹೆಯಂತೆ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿತ್ತು. ಹಾಗಿದ್ದರೂ ಪಾಕಿಸ್ತಾನ ಕೆಲವೇ ನಿಮಿಷಗಳಲ್ಲಿ ಕದನ  ವಿರಾಮ ಉಲ್ಲಂಘಿಸಿ ದಾಳಿ ನಡೆಸಿತ್ತು.

ಇದರ ಬೆನ್ನಲ್ಲೇ ಭಾರತದಲ್ಲಿ ಕದನ ವಿರಾಮಕ್ಕೆ ಒಪ್ಪಿದ್ದಕ್ಕೆ ಅಸಮಾಧಾನ ಶುರುವಾಗಿತ್ತು. ಇಂದು ಸಭೆ ನಡೆಸಿರುವ ಭಾರತೀಯ ಸೇನೆ ಒಂದು ವೇಳೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದರೆ ಪ್ರತಿದಾಳಿ ನಡೆಸಿ ಎಂದು ವಿಂಗ್ ಕಮಾಂಡರ್ ಗಳಿಗೆ ಆದೇಶ ನೀಡಿದೆ.

ನಿನ್ನೆ ಸಂಜೆ ಕದನ ವಿರಾಮ ಘೋಷಣೆಯಾದ ಬಳಿಕವೂ ಪಾಕಿಸ್ತಾನ ಭಾರತದ ನಾಗರಿಕ ಪ್ರದೇಶದ ಮೇಲೆ ಡ್ರೋಣ್ ದಾಳಿ ನಡೆಸಿತ್ತು. ಇಂದೂ ಇದೇ ರೀತಿ ನಡೆದರೆ ಭಾರತದಿಂದಲೂ ತಕ್ಕ ಪ್ರತ್ಯುತ್ತರ ನಿರೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments