ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,16,13,993ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,23,810ಕ್ಕೆ ಜಿಗಿತ ಕಂಡಿದೆ. ಒಂದು ದಿನದಲ್ಲಿ 37,291 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,07,81,263ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 231 ಮಂದಿ ಸೋಂಕಿಗೆ ಬಲಿಯಾಗಿದ್ದರೆ, ಕೇರಳದಲ್ಲಿ 116 ಮಂದಿ ಸಾವಿಗೀಡಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಮಾಣ ಏರಿಕೆಯ ಸೂಚನೆ ನೀಡಿದೆ.