ಲಕ್ನೋ : 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ದೇಶದ ಜನರು 5 ಸಂಕಲ್ಪಗಳನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಿದರೆ,
ಭಾರತ ಸೂಪರ್ ಪವರ್ ಆಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು, ಗುಲಾಮಗಿರಿ ಸಂಕೇತವನ್ನು ಅಳಿಸಿ ಹಾಕುವುದು, ನಮ್ಮ ಪರಂಪರೆ ಬಗ್ಗೆ ಹೆಮ್ಮೆ ಪಡುವುದು,
ಏಕತೆ ಮತ್ತು ಸಮಗ್ರತೆ, 2047 ರ ವೇಳೆಗೆ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದು ಐದು ಪ್ರತಿಜ್ಞೆಗಳನ್ನು ಮಾಡುವಂತೆ ಜನರಿಗೆ ಕರೆ ನೀಡಿದ್ದರು.
ಬಲ್ಲಿಯಾ ಬಲಿದಾನ ದಿವಸ ನಿಮಿತ್ತ ಬಲ್ಲಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಈ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್. ಪ್ರಧಾನಿ ಮೋದಿ ಅವರು ಆಗಸ್ಟ್ 15 ರಂದು ಐದು ಸಂಕಲ್ಪಗಳನ್ನು ಮಾಡುವಂತೆ ಜನತೆಗೆ ಕರೆ ನೀಡಿದ್ದಾರೆ.
ಪ್ರತಿಯೊಬ್ಬರು ಐದು ಸಂಕಲ್ಪಗಳನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯದ ಹಾದಿಯಲ್ಲಿ ಸಾಗಿದರೆ, ಭಾರತ ಖಂಡಿತವಾಗಿಯೂ ಸೂಪರ್ ಪವರ್ ಆಗುತ್ತದೆ. ಮುಂದಿನ ದಿನಗಳಲ್ಲಿ ಭಾರತ ಜಗತ್ತನ್ನು ಮುನ್ನಡೆಸಲಿದೆ ಎಂದು ತಿಳಿಸಿದ್ದಾರೆ.