Publish Date: Sun, 13 Aug 2017 (11:50 IST)
Updated Date: Sun, 13 Aug 2017 (11:53 IST)
ಜಮ್ಮು ಕಾಶ್ಮಿರದ ಶೋಪಿಯಾನ್‌ನಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.
ಇಂದು ಬೆಳಿಗ್ಗೆ ಉಗ್ರರು ಅಡಗಿರುವ ಮಾಹಿತಿ ತಿಳಿದ ಸೇನಾಪಡೆಗಳು ಉಗ್ರರ ಅಡಗುತಾಣವನ್ನು ಸುತ್ತುವರಿದಿದೆ. ಉಗ್ರರು ಸೇನಾಪಡೆಗಳ ಮೇಲೆ ದಾಳಿ ನಡೆಸಿದಾಗ ಸೇನಾಯೋಧರು ಪ್ರತಿದಾಳಿ ನಡೆಸಿ ಮೂವರು ಉಗ್ರರನ್ನು ಹತ್ಯೆಗೈದಿದ್ದಾರೆ.
ಇದೇ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿದ್ದಾರೆ ಎನ್ನುವ ಮಾಹಿತಿ ಪಡೆದ ಸೇನೆ ಪ್ರದೇಶಾದಾದ್ಯಂತ ಕೊಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.
ಪಾಕಿಸ್ತಾನದಿಂದ ಕಾಶ್ಮಿರದ ಗಡಿಯೊಳಗೆ ನುಗ್ಗಿರುವ ಉಗ್ರರು ಸ್ವಾತಂತ್ರ್ಯೋತ್ಸವದ ದಿನದಂದು ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಅಧಿಕಾರಿಗಳು ಸೇನಾಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.