Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸರ್ಜಿಕಲ್ ಸ್ಟ್ರೈಕ್ ಒಪ್ಪಿಕೊಂಡ ವಿದೇಶಾಂಗ ಸಚಿವಾಲಯ: ಸರ್ಕಾರದಿಂದ ಅಧಿಕೃತ ಹೇಳಿಕೆ

ಸರ್ಜಿಕಲ್ ಸ್ಟ್ರೈಕ್ ಒಪ್ಪಿಕೊಂಡ ವಿದೇಶಾಂಗ ಸಚಿವಾಲಯ: ಸರ್ಕಾರದಿಂದ ಅಧಿಕೃತ ಹೇಳಿಕೆ
ನವದೆಹಲಿ , ಮಂಗಳವಾರ, 26 ಫೆಬ್ರವರಿ 2019 (11:41 IST)
ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಇಂದು ಬೆಳಗಿನ ಜಾವ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದು ನಿಜ ಎಂದು ವಿದೇಶಾಂಗ ಸಚಿವಾಲಯದಿಂದ ಸರ್ಕಾರದ ಪರವಾಗಿ ಅಧಿಕೃತ ಹೇಳಿಕೆ ನೀಡಿದೆ.


ಬಾಲಾಕೋಟ್ ನಲ್ಲಿ ಉಗ್ರರ ಕ್ಯಾಂಪ್ ಮೇಲೆ ವಾಯು ಸೇನೆ ದಾಳಿ ನಡೆಸಿದ್ದೇವೆ. ಜೈಶ್ ಉಗ್ರರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆದಿದೆ. ದಾಳಿಯಲ್ಲಿ ಉಗ್ರ ಮೌಲಾನಾ ಯೂಸಫ್ ಅಜರ್  ಸೇರಿದಂತೆ ಹಲವು ಉಗ್ರರ ಹತ್ಯೆಯಾಗಿದೆ. ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಜಯ್ ಗೋಖಲೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆದರೆ ಈ ಬಗ್ಗೆ ಪತ್ರಕರ್ತರು ಹೆಚ್ಚಿನ ಪ್ರಶ್ನೆಗಳು ಕೇಳಿದಾಗ ಸದ್ಯಕ್ಕೆ ಇದರ ಬಗ್ಗೆ ಉತ್ತರಿಸುವುದಿಲ್ಲ ಎಂದಿದ್ದಾರೆ. ಸದ್ಯದಲ್ಲೇ ಈ ಬಗ್ಗೆ ಸದ್ಯದಲ್ಲೇ ನಿಮಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದಷ್ಟೇ ಹೇಳಿದ್ದಾರೆ

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಂದು ಸರ್ಜಿಕಲ್ ಸ್ಟ್ರೈಕ್: ಇಂದು ಏರ್ ಸ್ಟ್ರೈಕ್? ಕಾರ್ಯಾಚರಣೆ ಹೇಗಿತ್ತು ಗೊತ್ತಾ?