ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸೋಮವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ್ದರು.
ಈ ಕಟ್ಟಡದಲ್ಲಿ ಒಂದೇ ಬಾತ್ರೂಂನಲ್ಲಿ ಎರಡು ಕಮೋಡ್ಗಳನ್ನು ನಿರ್ಮಿಸಲಾಗಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಶ್ರೀಪೆರಂಬದೂರಿನಲ್ಲಿ ತಮಿಳುನಾಡು ರಾಜ್ಯ ಕೈಗಾರಿಕೆಗಳ ಉತ್ತೇಜನ ನಿಗಮ 1.80 ಕೋಟಿ ರೂಪಾಯಿ ಬಜೆಟ್ನಲ್ಲಿ ಹೊಸದಾಗಿ ನಿರ್ಮಿಸಲಾದ ಕಟ್ಟಡದಲ್ಲಿ ಒಂದೇ ಬಾತ್ರೂಂನಲ್ಲಿ ಎರಡು ಕಮೋಡ್ಗಳಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ.